ಕರಾವಳಿ
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಕಾರ್ಯಕ್ರಮ..!

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಅವರಿಗೆ ದಿನಾಂಕ 18-08-2021 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.