
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದರು.
ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸರ್ಜರಿ ಯಶಸ್ವಿಯಾಗಿದೆ. ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿಕೆ ನೀಡಿದೆ.
ಈ ಹಿಂದೆ ಮಾ.30ರಂದು ಏಮ್ಸ್ ನಲ್ಲಿ ಯಶಸ್ವಿಯಾಗಿ ಬೈಪಾಸ್ ಸರ್ಜರಿ ಮಾಡಲಾಗಿತ್ತು.