ರಾಜ್ಯ

ದಂಪತಿಗಳ ಬರ್ಬರ ಹತ್ಯೆ!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ದಿನದಂದೇ ದುಷ್ಕರ್ಮಿಗಳು ದಂಪತಿಗಳನ್ನು ಕೊಲೆಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ದಂಪತಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಕಾಶಿನಗರದ ಶಾಂತರಾಜು ಹಾಗೂ ಪ್ರೇಮಲತಾ ಎನ್ನಲಾಗಿದೆ. ಹಾಡಹಗಲೇ ದಾಳಿ ನಡೆಸಿದ ದುಷ್ಕರ್ಮಿಗಳು ದಂಪತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

 

 

 

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker