
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ೫,೫೮,೯೦೦ ಲಕ್ಷದ ಚಿನ್ನ ಸಾಗಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ.
ದುಬೈನಿಂದ ಮಂಗಳೂರಿಗೆ ಆಗಮಿಸಿದ ಮುರುಡೇಶ್ವರ ನಿವಾಸಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿದಾಗ ಆರೋಪಿಯು ದುಬೈನಿಂದ ಮಹಿಳೆಯರ ಹೇರ್ಬ್ಯಾಂಡ್ ಇನ್ನಿತರ ವಸ್ತುಗಳ ಮೂಲಕ ಚಿನ್ನ ಸಾಗಟ ಮಾಡುತ್ತಿರುವುದು ಪತ್ತೆಯಾಗಿದೆ.
ಇನ್ನು ಒಟ್ಟು ೧೧೫ ಗ್ರಾಂ ನ ೫೫೮೯೦೦ ಲಕ್ಷ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.