ರಾಜ್ಯ
ಡೆತ್ ನೋಟ್ ಪೋಸ್ಟ್ ಮಾಡಿ ನೇಣಿಗೆ ಶರಣಾದ ಮಗಳು

ಮೈಸೂರು: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾಗಿದ್ದಾಳೆ.
ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಮೋಹನ್ ಕುಮಾರಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನು ಪ್ರೀತಿಸಿ ಮದುವೆ ಆಗಿದ್ದರು. ಲಾಕ್’ಡೌನ್ ವೇಳೆ ಆರ್ಥಿಕ ಸಂಕಷ್ಟದಿಂದ ಮೋಹನ ಕುಮಾರಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಎನ್.ಆರ್.ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.