ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 13,615 ಕೊರೋನಾ ಸೋಂಕಿನ ಪ್ರಕರಣ ವರದಿಯಾಗಿದೆ.
ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ13,265 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 20 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 5,25, 474ಕ್ಕೆ ತಲುಪಿದೆ. ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,043ಕ್ಕೆ ತಲುಪಿದೆ. ಪಾಸಿಟಿವಿಟಿ ದರ ಶೇಕಡ 3.23
ಆಗಿದೆ.