
ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಯಲ್ಲಿ ಇಂದು ದಿನಾಂಕ 28-08-2021 ರಂದು ನಡೆದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಶಾಸಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಸಭೆಯಲ್ಲಿ ಶಾಲೆಯ ಕುಂದು ಕೊರತೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ಪರಿಹಾರ ಕಲ್ಪಿಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ವಸಂತ್ ಸೇರ್ವೆಗಾರ್, ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ, ಪ್ರೌಢಶಾಲಾ ಹಿರಿಯ ಸಹ ಶಿಕ್ಷಕರಾದ ಶೋಭಾ ನಾಯಕ್ ಹಾಗೂ ಕೊಕ್ಕರ್ಣೆ ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.