ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಉಡುಪಿ ಜಿಲ್ಲೆ ವತಿಯಿಂದ ಬನ್ನಂಜೆ ಶ್ರೀ ನಾರಾಯಣಗುರು ಮಂದಿರದ ಸಭಾಂಗಣದಲ್ಲಿ ಇಂದು ದಿನಾಂಕ 23-08-2021 ರಂದು “ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ” ನಡೆಯಿತು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಹಾಗೂ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.