
ಉಡುಪಿ ವಿಧಾನಸಭಾ ಕ್ಷೇತ್ರದ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ನಗರ ಸಭೆಯಿಂದ ರೂ. 9 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 24-08-2021 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ದಿನೇಶ್ ಪೈ, ಸುಭೇದಾ, ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಸವಿತಾ, ಎ.ಪಿ.ಎಂ.ಸಿ ಸದಸ್ಯರಾದ ಉಮೇಶ್ ಶೆಟ್ಟಿ, ಮಾಜಿ ನಗರಸಭಾ ಸದಸ್ಯರಾದ ಚಂದ್ರಕಾಂತ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವೀಣಾ ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.