ರಾಷ್ಟ್ರೀಯ
ಇಂದಿನ ಕೊರೊನಾ ಪ್ರಕರಣ ಮಾಹಿತಿ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ ೨೫,೪೬೭ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ ೩೯,೪೮೬ ಮಂದಿ ಕಳೆದ ೨೪ ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ೩,೧೯,೫೫೧ ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ೩,೧೭,೨೦,೧೧೨ ಮಂದಿ ಗುಣಮುಖರಾಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೩೫೪ ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು ೪,೩೫,೧೧೦ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ ೨೪ ಗಂಟೆಗಳಲ್ಲಿ ೬೩,೮೫,೨೯೮ ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ ೫೮,೮೯,೯೭,೮೦೫ ಡೋಸ್ ಲಸಿಕೆ ನೀಡಲಾಗಿದೆ.