ರಾಜ್ಯ
ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅಸ್ವಸ್ಥ ಆಸ್ಪತ್ರೆಗೆ ದಾಖಲು.

ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೃದಯಬಡಿತ ಕಡಿಮೆಯಾಗಿ ಸುಸ್ತಿನಿಂದ ಬುಧವಾರ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ದೊಡ್ಡಣ್ಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಶಾಶ್ವತ ಪೇಸ್ ಮೇಕರ್ ಅಳವಡಿಸುವುದಾಗಿ ವೈದ್ಯರು ತಿಳಿಸಿದ್ದಾರೆ.
ದೊಡ್ಡಣ್ಣ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಮೂರು ದಿನದ ಬಳಿಕ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ತಿಳಿಸಿದ್ದಾರೆ.