
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಗೂಗಲ್ ತನ್ನ ಉದ್ಯೋಗಿಗಳಿಗೆ 2021 ರ ಜೂನ್ ಅಂತ್ಯದವರೆಗೂ ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಗೂಗಲ್ ಮತ್ತು ಅಲ್ಪಾಬೆಟ್ ಸಿಇಒ ಸುಂದರ್ ಪಿಚೈ ಉದ್ಯೋಗಿ ಗಳಿಗೆ ಇ-ಮೇಲ್ ಕಳುಹಿಸಿದ್ದು, ಜೂನ್ 30,2021 ರವರೆಗೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಅವಕಾಶವನ್ನು ನೀಡಲಾಗಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಗೂಗಲ್ ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಕ್ರಮ ಕೈಗೊಳ್ಳಲಾಗಿದ್ದು, ಭಾರತ ಸೇರಿ ವಿಶ್ವದಾದ್ಯಂತ ಗೂಗಲ್ ಹಾಗೂ ಅಲ್ಟಾಬೆಟ್ ಸಂಸ್ಥೆಯ 2 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಇದು ಅನುಕೂಲವಾಗಲಿದೆ.