
“ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಕ್ಕುಂಜೆ ವಾರ್ಡಿನಲ್ಲಿ 60 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 04-07-2021 ರಂದು ಕಕ್ಕುಂಜೆ ಬೈಲಿನಲ್ಲಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಸಣ್ಣ ನೀರಾವರಿ ಸಚಿವರಾದ ಶ್ರೀ ಜೆ. ಸಿ ಮಾಧುಸ್ವಾಮಿ, ಕಾರ್ಯದರ್ಶಿ ಶ್ರೀ ಮೃತ್ಯುಂಜಯ ಸ್ವಾಮಿ ಹಾಗೂ ಅಂಬಾಗಿಲು ಪ್ರಭು ಟ್ರೇಡರ್ಸ್ ಮಾಲಕರಾದ ಶ್ರೀ ಕೆ.ಬಿ. ಸೀತಾರಾಮ ಪ್ರಭು ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.
ಸಣ್ಣ ನೀರಾವರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಮಾತನಾಡಿ, ಶಾಸಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಹಮ್ಮಿಕೊಂಡಿರುವ ಈ ಕಾರ್ಯ ದೇಶಕ್ಕೆ ಮಾದರಿಯಾಗಿದೆ. ಕೇದಾರೋತ್ಥಾನ ಟ್ರಸ್ಟ್ ರಚಿಸಿ ಇದರ ಮೂಲಕ ಹಲವಾರು ವರ್ಷಗಳಿಂದ ಹಡಿಲು ಬಿಟ್ಟ ಭೂಮಿಯನ್ನು ಸ್ಥಳೀಯ ಸಂಘ ಸಂಸ್ಥೆಗಳ ಹಾಗೂ ಯುವಕ-ಯುವತಿಯರನ್ನು ಒಟ್ಟುಗೂಡಿಸಿಕೊಂಡು ಸಾವಯವ ಕೃಷಿ ಮಾಡುತ್ತಿರುವುದು ಶ್ಲಾಘನೀಯ. ಈ ಕಾರ್ಯ ಇತರರಿಗೆ ಪ್ರೇರಣೆಯಾಗಿದೆ. ಯುವ ಸಮುದಾಯವನ್ನು ಕೃಷಿಯತ್ತ ಸೆಳೆದಿರುವುದು ಉತ್ತಮ ಬೆಳವಣಿಗೆ ಎಂದರು.
ಈ ಭಾಗದಲ್ಲಿ ಹಡಿಲು ಭೂಮಿ ಆಂದೋಲನಕ್ಕೆ ಸಹಕರಿಸಿದ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರಿಧರ್ ಕರಂಬಳ್ಳಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.