
ದಾವಣಗೆರೆ : ಕೊರೋನಾ ನಿಯಂತ್ರಿಸಲು ಮತ್ತೊಮ್ಮೆ ಲಾಕ್ ಡೌನ್ ಮಾಡಲು ಸಾಧ್ಯವಿಲ್ಲ ಕೋರೋನ ವೈರಸ್ ಗೆ ವ್ಯಾಕ್ಸಿನ್ ಕಂಡುಹಿಡಿಯುವವರೆಗೂ ಸಾರ್ವಜನಿಕರೂ ಮುಂಜಾಗ್ರತೆ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ,ಮಾಸ್ಕ್ ಧರಿಸುವುದು , ಸ್ಯಾನಿಟೈಜರ್ ಬಳಕೆ ಮಾಡುವ ಮೂಲಕ ವೈರಸ್ ನಿಯಂತ್ರಿಸಲು ಸಹಕರಿಸಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಲಾಕ್ ಡೌನ್ನಿಂದ ಆರ್ಥಿಕ ಹಿಂಜರಿತ ಉಂಟಾಗಿದೆ. ಮತ್ತೊಮ್ಮೆ ಲಾಕ್ ಡೌನ್ ಹೇರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ.ಜುಲೈ- ಆಗಸ್ಟ್ ನಲ್ಲಿ ಕೊರೋನಾ ಪ್ರಕರಣ ಮತ್ತಷ್ಟುಹೆಚ್ಚಾಗುವ ಸಾಧ್ಯತೆ ಇದೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದು ಜನರೂ ಯಾವುದೇ ಆತಂಕಪಡಿಸಬೇಕಿಲ್ಲ. ಕೊರೋನಾ ವೈರಸ್ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಅರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದರು.