ಕರಾವಳಿ
ಉಡುಪಿ ಡಿ ಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ವರ್ಗಾವಣೆಗೊಂಡಿದ್ದು, ಕೂರ್ಮ ರಾವ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜಿ.ಜಗದೀಶ್ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿದ್ದಾರೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದೆ.
2019 ರಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದ, ಜಿ ಜಗದೀಶ್ ಅವರು, ಕೋವಿಡ್ ಸಂಕಷ್ಟ ಹಾಗೂ ಮಳೆಯಿಂದಾದ ಪ್ರವಾಹ ಸಂದರ್ಭದಲ್ಲಿ ಯಶಸ್ವಿಯಾಗಿ ಆಡಳಿತವನ್ನು ನಿಭಾಯಿಸಿದ್ದರು. ಜಿ. ಜಗದೀಶ್ ಅವರು 2 ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿದ್ದರು. ಇದೀಗ ಜಿಲ್ಲೆಯಿಂದ ವರ್ಗವಣೆ ಆಗುತ್ತಿದ್ದಾರೆ.