
ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೈನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದ ಅವರು ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಹೊರ ನಡೆಯುತ್ತಿದ್ದಾರೆ.
ಈ ದಿನ ನಾನು ಪ್ರೀತಿಸಿದ ಆಟಕ್ಕೆ ಅಧಿಕೃತವಾಗಿ ವಿದಾಯ ಹೇಳುತ್ತಿದ್ದೇನೆ. ಇದು ಕಹಿ ಸತ್ಯವಾಗಿದೆ, ಆದರೆ ಒಪ್ಪಿಕೊಳ್ಳಲೇಬೇಕು. ಈ ನನ್ನ ಕ್ರಿಕೆಟ್ ಪಯಣದಲ್ಲಿ ನನಗೆ ಬೆಂಬಲಿಸಿದ ಕುಟುಂಬ, ತಂಡದ ಸಹ ಆಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳಿಗೆ ಧನ್ಯವಾದ ಎಂದು ಭಾವನಾತ್ಮಕ ಬರಹವನ್ನು ಹಂಚಿಕೊಳ್ಳುವ ಮೂಲಕ ಸ್ಟೇನ್ ನಿವೃತ್ತಿ ಘೋಷಿಸಿದ್ದಾರೆ.