ಸರಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ – ಪ್ರೌಢಶಾಲಾ ವಿಭಾಗ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ

ಸರಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಪ್ರೌಢಶಾಲೆಯಲ್ಲಿ ಇಂದು ದಿನಾಂಕ 31-08-2021 ರಂದು ನಡೆದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಶಾಸಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಶಾಲೆಯ ಕುಂದು ಕೊರತೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ಪರಿಹಾರ ಕಲ್ಪಿಸುವ ಕುರಿತು ಚರ್ಚಿಸಲಾಯಿತು.
ಬಳಿಕ “ಮುರುವಾಯಿ ಜೀವನ ಚರಿತ್ರೆ” ಪುಸ್ತಕ ರಚನಾಕಾರ ಹಾಗೂ ಬಾಲ ವಿಜ್ಞಾನಿಯಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ 10ನೇ ತರಗತಿ ವಿದ್ಯಾರ್ಥಿ “ಲಿಖಿತ್” ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಾಂತರದ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ರಘುಪತಿ ಬ್ರಹ್ಮಾವರ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸದಾನಂದ ವಾರಂಬಳ್ಳಿ, ಉಪಾಧ್ಯಕ್ಷರಾದ ಸತೀಶ್ ಕೋಟ್ಯಾನ್, ಪ್ರಾಂಶುಪಾಲರಾದ ರವೀಂದ್ರ ಉಪಾಧ್ಯ, ಉಪ ಪ್ರಾಂಶುಪಾಲರಾದ ಬಿ.ಟಿ ನಾಯ್ಕ್ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕರಾದ ಶಶಿಧರ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.