
ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 41,965 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ 30,203) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 33,964 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,78,181 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,19,93,644 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 460 ಮಂದಿ (ಕೇರಳ 115) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,39,020 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 1,33,18,718 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 65,41,13,508 ಡೋಸ್ ಲಸಿಕೆ ನೀಡಲಾಗಿದೆ.














