
ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ ೨೦೨೧ ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿ ಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.
ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿರುವ ೪೫ ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿಯು ೨೫೦೦೦ ರೂ. ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕ ವನ್ನು ಒಳಗೊಂಡಿದೆ.
ಇವರು ಪ್ರಸ್ತುತ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.