
ಮಲ್ಪೆ ಹಿಂದೂ ರುದ್ರ ಭೂಮಿಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯಿಂದ ರೂ. 5.00 ಲಕ್ಷ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 03-09-2021 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ದೀಪ ಬೆಳಗಿಸುವುದರ ಮೂಲಕ ಸ್ವಾಗತ ಗೋಪುರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ಮಲ್ಪೆ ಹಿಂದೂ ರುದ್ರ ಭೂಮಿ ಸಮಿತಿಯ ಅಧ್ಯಕ್ಷರಾದ ಪಾಂಡುರಂಗ, ಕಾರ್ಯದರ್ಶಿಗಳಾದ ಮಂಜು ಕೊಳ, ಹಾಗೂ ಪದಾಧಿಕಾರಿಗಳು, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.