
ಬೆಂಗಳೂರು :ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಇಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಲಾಟರಿ ಹೊರತುಪಡಿಸಿ, ಕಂಪ್ಯೂಟರ್ ಮೊಬೈಲ್ ಸೇರಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಹಣದ ವ್ಯವಹಾರ ನಡೆಸುವ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಸರ್ಕಾರದ ಚಿಂತನೆ ನಡೆಸಿದೆ ಎಂದರು.
ಪಂಚಾಯತ್ ರಾಜ್ ಡಿಲಿಮಿಟೇಷನ್ ಆ್ಯಕ್ಟ್‌ಗೆ ತಿದ್ದುಪಡಿಗೆ ಸಹ ಸಂಪುಟ ನಿರ್ಧರಿಸಿದೆ. ಅಗತ್ಯ ಬಿದ್ದರೆ ಮಾತ್ರ ಡಿಲಿಮಿಟೇಷನ್ ಕಮಿಷನ್ ರಚನೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರವಾಗಿ ನಾಳೆ ಭಾನುವಾರ ತಜ್ಞರ ಜತೆ ಸಭೆ ನಡೆಸಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.