ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಉಡುಪಿ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಉಡುಪಿ ವಲಯ ವತಿಯಿಂದ ಸಂತ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ “ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ” – ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ 2021 ಕಾರ್ಯಕ್ರಮ ಇಂದು ದಿನಾಂಕ 05-09-2021 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಶಾಸಕರು ಸರ್ವರಿಗೂ ಅಭಿನಂದನೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್. ಎಚ್ ನಾಗೂರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಇತರ ಪ್ರಮುಖರು ಉಪಸ್ಥಿತರಿದ್ದರು.