
ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಬ್ರಹ್ಮಾವರ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಅಮ್ಮೆಂಬಳ ಸುಬ್ಬರಾವ್ ಪೈ ವೇದಿಕೆಯಲ್ಲಿ ಇಂದು ದಿನಾಂಕ 05-09-2021 ರಂದು ನಡೆದ “ಶಿಕ್ಷಕರ ದಿನಾಚರಣೆ 2021” ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಜಿಲ್ಲಾ ಪ್ರಶಸ್ತಿ ವಿಜೇತರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಇಬ್ರಾಹಿಂಪುರ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಓಂ ಪ್ರಕಾಶ್, ಮ್ಯಾಕ್ಸಿನ್ ಸೆಲ್ಡಂ ಮತ್ತು ಗ್ರೇಟ್ ಸೆಲ್ಡಂ, ತನಿಷ್ಕ್ ಡೈಮಂಡ್ ಅಂಡ್ ಜ್ಯುವೆಲರಿ ಮಾಲಕರು, ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಉಪ ಪ್ರಾಂಶುಪಾಲರಾದ ಬಿ.ಟಿ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಅರ್ಚನ ಅವರು ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ನಂಚಾರು ಶಶಿಧರ ಶೆಟ್ಟಿ, ಶಿಕ್ಷಕಿ ಮಂಜುಳ ಜಯಕರ್ ಕಾರ್ಯಕ್ರಮ ನಿರೂಪಿಸಿದರು.