ತಾಜಾ ಸುದ್ದಿಗಳುವಿಶೇಷ ಲೇಖನಗಳು

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸ್ ಆದವರಿಗೆ ಉದ್ಯೋಗ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಉಡುಪಿ ನ್ಯಾಯಾಲಯದ ವೆಬ್‌ಸೈಟ್‌ https://districts.ecourts.gov.in/udupi-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ ನಲ್ಲಿ ಮಾತ್ರ ಸಲ್ಲಿಸಬೇಕು. ಅದನ್ನು ಹೊರತುಪಡಿಸಿ ಖುದ್ದಾಗಿ ಅಂಚೆ ಮೂಲಕ ಯಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಒಟ್ಟು ಹುದ್ದೆಗಳು- 8
ಉದ್ಯೋಗದ ಸ್ಥಳ- ಉಡುಪಿ

ವಿದ್ಯಾರ್ಹತೆ- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.

ವಯೋಮಿತಿ- ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರ್ಣಗೊಳಿಸಬೇಕು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗೆ 35 ವರ್ಷ. (ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ)

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 15 ನಿಮಿಷ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27650/- ಮತ್ತು ಇತರ ಭತ್ಯೆಗಳನ್ನು ಪಡೆಯುವರು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 01-09-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ – 30-09-2021

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker