
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಐ.ಆರ್.ಸಿ.ಎ ಉಡುಪಿ ಮತ್ತು ಸ್ವಯಂ-ಸೇವಾ ಸಂಸ್ಥೆಗಳು, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 03-08-2021 ರಂದು ಉಡುಪಿ ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾದ “ನಶಾ ಮುಕ್ತ ಭಾರತ ಅಭಿಯಾನ ಉಡುಪಿ ಜಿಲ್ಲೆ” ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಾಳಿಗಾ ಆಸ್ಪತ್ರೆ ಮನಶಾಸ್ತ್ರಜ್ಞರಾದ ಪಿ.ವಿ ಭಂಡಾರಿ, ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್, ಜಿಲ್ಲಾ ವಿಕಲಚೇತನ ಸಬಲೀಕರಣ ಅಧಿಕಾರಿಗಳಾದ ಶ್ರೀಮತಿ ರತ್ನಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶ್ರೀಮತಿ ಶರ್ಮಿಳಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.