
ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ವಿಶೇಷ ಸಭೆ ಇಂದು ದಿನಾಂಕ 06-09-2021 ರಂದು ಮಣಿಪಾಲದ ಹೊಟೇಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಶಾಸಕರು, ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕದ ಅಥ್ಲೆಟಿಕ್ ಅಸೋಸಿಯೇಷನ್ ನ ಅಧ್ಯಕ್ಷರು, ಮಾಜಿ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್, ಕಾರ್ಯದರ್ಶಿಗಳಾದ ರಾಜವೇಲು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ದಕ್ಷಿಣ ಕನ್ನಡ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಮಂಜುನಾಥ ಭಂಡಾರಿ, ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಕಾರ್ಯದರ್ಶಿಗಳಾದ ಮಹೇಶ್ ಠಾಕೂರ್ ಹಾಗೂ ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.