
ಬೆಂಗಳೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ,ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ.
ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವಂತಲ್ಲ/ಒತ್ತಡ ಹೇರುವಂತಿಲ್ಲ ಹಾಗೂ ಬಿಲ್ ಪಾವತಿ ಮಾಡದೆ ಇದ್ದ ಪಕ್ಷದಲ್ಲಿ ಮೃತದೇಹದ ಹಸ್ತಾಂತರ ಮಾಡಲು ನಿರಾಕರಿಸುವಂತಿಲ್ಲ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.