ರಾಷ್ಟ್ರೀಯ
ಇಂದು ಪ್ರಧಾನಿ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಸಮಾಲೋಚನೆ

ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಇನ್ನಿತರ ವಿಷಯಗಳ ಕುರಿತು ಸಿಎಂ ಪ್ರಧಾನಿ ಅವರಿಗೆ ಮಾಹಿತಿ ನೀಡಲಿದ್ದಾರೆ.
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ಹಗರಣ ಕುರಿತಂತೆ ಕೇಂದ್ರ ಸರ್ಕಾರ ಸಂಪೂರ್ಣ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ. ಜಾರಿ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸುತ್ತಿದೆ ಎಂಬುದು ರಾಜ್ಯ ಸರ್ಕಾರದ ವಾದವಾಗಿದೆ. ಇತ್ತೀಚೆಗೆ ನಡೆದ ಉಪ ಚುನಾವಣೆ ಫಲಿತಾಂಶ ಕುರಿತಂತೆ ಸಿಎಂ ಪ್ರಧಾನಿ ಅವರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.