ಕರಾವಳಿ
ಉಡುಪಿಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆ – ವೀಕೆಂಡ್ ಕರ್ಫ್ಯೂ ತೆರವಿಗೆ ಶಾಸಕ ರಘುಪತಿ ಭಟ್ ಒತ್ತಾಯ

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಅಧಿಕವಾಗಿದ್ದ ಜಿಲ್ಲೆಗಳಲ್ಲಿ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹೇರಲಾಗಿದ್ದು, ಪ್ರಸ್ತುತ ಪಾಸಿಟಿವಿಟಿ ರೇಟ್ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕೋವಿಡ್ ನಿಯಂತ್ರಣ ಸಂಬಂಧ ಹೊರಡಿಸಿದ ಮಾರ್ಗಸೂಚಿಯನ್ನು ವಿಸ್ತರಿಸಿ ಆಯಾ ಜಿಲ್ಲೆಗಳ ಕೋವಿಡ್ ಸ್ಥಿತಿಗತಿಯ ಆಧಾರದ ಮೇಲೆ ಜಿಲ್ಲಾಧಿಕಾರಿಯವರಿಗೆ ವೀಕೆಂಡ್ ಕರ್ಫ್ಯೂ ಹೇರುವ ಅಥವಾ ತೆರವುಗೊಳಿಸುವ ಅಧಿಕಾರವನ್ನು ಹೊಸ ಮಾರ್ಗಸೂಚಿಯಲ್ಲಿ ಸೂಚಿಸಿದೆ. ಉಡುಪಿಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆ ಇರುವುದರಿಂದ ಇಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ಆದ್ದರಿಂದ ಜನರ ಭಾವನೆಗಳಿಗೆ ಸ್ಪಂದಿಸಿ ವೀಕೆಂಡ್ ಕರ್ಫ್ಯೂ ಹೇರಬಾರದಾಗಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಗಣೇಶ ಹಬ್ಬ ಸೇರಿದಂತೆ ಅಗತ್ಯ ಕೆಲಸ ಕಾರ್ಯಗಳಿಗೆ ಹೊರಗಡೆ ಓಡಾಡುವಾಗ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸಿ ಮುಂಜಾಗ್ರತೆ ವಹಿಸುವಂತೆ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.