ರಾಜ್ಯ
ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ 34ನೇ ಚಾತುರ್ಮಾಸ್ಯ ವ್ರತ ಸಮಾರೋಪ – “ನಾಗರಿಕ ಗುರುವಂದನೆ”

ಪೇಜಾವರ ಮಠದ ಅವಿಚ್ಛಿನ್ನ ಯತಿ ಪರಂಪರೆಯ ಉತ್ತರಾಧಿಕಾರಿಗಳೂ, ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಕರಕಮಲ ಸಂಜಾತರೂ ಆಗಿರುವ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ 34ನೇ ಚಾತುರ್ಮಾಸ್ಯ ವ್ರತ ಸಮಾರೋಪದ ನಿಮಿತ್ತ “ನಾಗರಿಕ ಗುರುವಂದನೆ” ಕಾರ್ಯಕ್ರಮ ದಿನಾಂಕ 20-09-2021 ರಂದು ಪೂರ್ಣಪ್ರಜ್ಞ ವಿದ್ಯಾಪೀಠ ಕತ್ರಿಗುಪ್ಪೆ, ಬೆಂಗಳೂರು ಇಲ್ಲಿ ನಡೆಯಿತು.
ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರು ಭಾಗವಹಿಸಿ ಶುಭಾಶಂಸನೆಗೈದರು.
ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುವಂದನೆ ಸಲ್ಲಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನೀಲ್ ಕುಮಾರ್, ಬಸವನಗುಡಿ ಶಾಸಕರಾದ ರವಿ ಸುಬ್ರಮಣ್ಯ ಉಪಸ್ಥಿತರಿದ್ದರು.