ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಯುರ್ವೇದ ಆಸ್ಪತ್ರೆ “ರತ್ನಶ್ರೀ ಆರೋಗ್ಯಧಾಮ” ನೂತನ ಕಟ್ಟಡ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಯುರ್ವೇದ ಆಸ್ಪತ್ರೆ ಕುತ್ಪಾಡಿ ಇದರ “ರತ್ನಶ್ರೀ ಆರೋಗ್ಯಧಾಮ” ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂದು ದಿನಾಂಕ 25-09-2021 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಪಂಚಕರ್ಮ ಸೆಂಟರ್ ರನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾll. ಡಿ. ವೀರೇಂದ್ರ ಹೆಗ್ಗಡೆ, ಕೇಂದ್ರ ಆಯುಷ್ ಮತ್ತು ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಸರ್ಬಾನಂದ ಸೋನೋವಲ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಯುರ್ವೇದ ಆಸ್ಪತ್ರೆ, ಉಡುಪಿ ಇದರ ಪ್ರಾಂಶುಪಾಲರಾದ ಡಾll. ಮಮತಾ ಕೆ. ವಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.