ಡಾll ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ರಸಾಯನಶಾಸ್ತ್ರ, ಪ್ರಯೋಗಾಲಯ, ಗ್ರಂಥಾಲಯ ಉದ್ಘಾಟನೆ

ಡಾll ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿಗೆ ಡಾll ಜಿ. ಶಂಕರ್ ಅವರ ಕೊಡುಗೆಯಾಗಿ ನಿರ್ಮಿಸಲಾದ ಸ್ನಾತಕೋತ್ತರ ರಸಾಯನಶಾಸ್ತ್ರ ಮತ್ತು ಪ್ರಯೋಗಾಲಯ ಹಾಗೂ ಗ್ರಂಥಾಲಯ ಇಂದು ದಿನಾಂಕ 25-09-2021 ರಂದು ಉದ್ಘಾಟಿಸಲಾಯಿತು.
ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಸಿ. ಎನ್ ಅಶ್ವತ್ಥನಾರಾಯಣ್ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಡಾll. ಶಿವಾನಂದ ನಾಯಕ್ ರವರು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಬರೆದಿರುವ “ಜೀವ ರಸಾಯನಶಾಸ್ತ್ರ” ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕಾಲೇಜಿನ ಮಹಾಪೋಷಕರು ಮತ್ತು ಪ್ರವರ್ತಕರು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ನ ಡಾll ಜಿ. ಶಂಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಯಶ್ ಪಾಲ್ ಸುವರ್ಣ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಜೆನ್ನಿಫರ್ ಲೊಲಿಟಾ, ಕಾಲೇಜು ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.