ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನೂತನ ತರಬೇತಿ ಸಂಕೀರ್ಣ ಉದ್ಘಾಟನೆ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಡುಪಿ ಇವರು ಉಡುಪಿ ಜಿಲ್ಲೆಯ ಉಪ್ಪೂರಿನಲ್ಲಿ ನಿರ್ಮಿಸಿರುವ “ನೂತನ ತರಬೇತಿ ಸಂಕೀರ್ಣ” ಉದ್ಘಾಟನೆ ಇಂದು ದಿನಾಂಕ 25-09-2021 ರಂದು ನಡೆಯಿತು.
ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಸಿ. ಎನ್ ಅಶ್ವತ್ಥನಾರಾಯಣ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣರಾಜ್ ಕೋಟ್ಯಾನ್ ಮತ್ತು ಜಿ.ಟಿ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ರಾಘವೇಂದ್ರ, ಟೊಯೋಟಾದ ಪ್ರಧಾನ ವ್ಯವಸ್ಥಾಪಕರಾದ ರೋಷನ್ ಹಾಗೂ ಇಲಾಖಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.