ಬೋಟ್ ಗಳಿಗೆ ಅಳವಡಿಸಿರುವ ದ್ವಿಮುಖ ಸಂವಹನ ಉಪಕರಣದಲ್ಲಿನ ಸಮಸ್ಯೆ ಕುರಿತು ಮಂಗಳೂರಿನಲ್ಲಿ ಸಭೆ

ಮೀನುಗಾರಿಕಾ ಬೋಟ್ ಗಳಿಗೆ ಅಳವಡಿಸಿರುವ ದ್ವಿಮುಖ ಸಂವಹನ ಉಪಕರಣ (two way communication)ದಲ್ಲಿ ಇರುವಂತಹ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಶ್ರೀ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 27-09-2021 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಡಾll. ಜಿ ಶಂಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ರಾಮಾಚಾರಿ, ಕೋಸ್ಟಲ್ ಗಾರ್ಡ್ ಡಿ.ಐ.ಜಿ ವೆಂಕಟೇಶ್, ಮತ್ತು ಮೀನುಗಾರರ ಸಂಘದ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.