ಮುಖ್ಯಮಂತ್ರಿಗಳಿಂದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನೂತನ ವಿಜ್ಞಾನ ಘಟಕ ಶಂಕು ಸ್ಥಾಪನೆ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನೂತನ ವಿಜ್ಞಾನ ಘಟಕ (SCIENCE BLOCK) ಶಂಕು ಸ್ಥಾಪನೆ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯ (COMPUTER SCIENCE LABORATORY) ಉದ್ಘಾಟನೆಯನ್ನು ಇಂದು ದಿನಾಂಕ 13-10-2021 ರಂದು ಸನ್ಮಾನ್ಯ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿ ಅವರು ನೆರವೇರಿಸಿದರು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನೀಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾll. ಚಂದ್ರಶೇಖರ್ ಹಾಗೂ ಕಾಲೇಜಿನ ಆಡಳಿತ ಮಂಡಳಿಯವರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಪ್ರಮುಖರು ಉಪಸ್ಥಿತರಿದ್ದರು.