ಮಲ್ಪೆ ಅಭಿವೃದ್ಧಿ ಸಮಿತಿ ಸಭೆ

ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಇಂದು ದಿನಾಂಕ 28-09-2021 ರಂದು ನಡೆದ “ಮಲ್ಪೆ ಅಭಿವೃದ್ಧಿ ಸಮಿತಿ” ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಸಭೆಯಲ್ಲಿ ಮಲ್ಪೆ ಸೀವಾಕ್ ಪ್ರದೇಶದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಯ ಕುರಿತು ಮತ್ತು ಬೀಚ್ ನಲ್ಲಿ ಕೈಗೊಳ್ಳುತ್ತಿರುವ ಮೂಲಭೂತ ಸೌಕರ್ಯ ಕಾಮಗಾರಿಯ ಕುರಿತು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ವಿಜಯ್ ಕೊಡವೂರು, ಸುಂದರ್ ಕಲ್ಮಾಡಿ, ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ನಗರ ಸಭೆಯ ಮಾಜಿ ಸದಸ್ಯರಾದ ಪಾಂಡುರಂಗ ಮತ್ತು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.