ಕರಾವಳಿ

ಕೋವಿಡ್-19 ಜನಜಾಗೃತಿ ಮತ್ತು ಪರಿಹಾರ ಆಂದೋಲನ

ನಿಟ್ಟೆ: ಪಡಿ ಸಂಸ್ಥೆ ಮಂಗಳೂರು, ನಿಟ್ಟೆ ಗ್ರಾಮ ಪಂಚಾಯತ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ‌ಇಂದು ಕೋವಿಡ್-19 ಜನಜಾಗೃತಿ ಮತ್ತು ಪರಿಹಾರ ಆಂದೋಲನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಸತೀಶ್ ಇವರು ಫಲಾನುಭವಿಗಳಿಗೆ ಕೋವಿಡ್ ಪರಿಹಾರ ಕಿಟ್ ವಿತರಣೆಗೆ ಚಾಲನೆ ನೀಡಿದ ಪಡಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕರಾದ ವಿವೇಕ್ ಇವರು ಕೋವಿಡ್-19ರ ಸಾಂಕ್ರಾಮಿಕ ಸೋಂಕು ಕಾಯಿಲೆ ಬಂದ ನಂತರ ಜನಜೀವನ ಅಸ್ತವ್ಯಸ್ತವಾಗಿದ್ದು ಕೆಲವರು ತಮ್ನ ಕಟುಂಬಗಳನ್ನೆ ಕಳೆದುಕೊಂಡಿದ್ದಾರೆ ಮತ್ತು ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದಾರೆ. ಉಡುಪಿ ಜಿಲ್ಲೆಯ 6 ಗ್ರಾಮ ಪಂಚಾಯತ್ ಮತ್ತು 3 ಮುನ್ಸಿಪಾಲಿಟಿಗಳಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲೆಯ ಒಟ್ಟು 288 ಫಲಾನುಭವಿಗಳಿಗೆ ಪರಿಹಾರ ನೀಡುವ ಯೋಜನೆ ಹಾಕಲಾಗಿದೆ ಎಂದು ತಮ್ಮ ಪ್ರಸ್ತಾವಿಕ ಮಾತಿನಲ್ಲಿ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!