ಕರಾವಳಿತಾಜಾ ಸುದ್ದಿಗಳು

ಖಾದಿ ಉತ್ಪನ್ನ ಬಳಸಿ ‘ಆತ್ಮನಿರ್ಭರ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸೋಣ; ಕುಯಿಲಾಡಿ

ಉಡುಪಿ : ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೆ.17ರಿಂದ ಅ.7ರ ವರೆಗೆ ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಸೆ.29ರಿಂದ ಅ.2ರ ವರೆಗೆ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋಧ್ಯೋಗ ಸಂಘ ಉಡುಪಿ ಇದರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಿರುವ ಖಾದಿ ಮೇಳವನ್ನು ಉದ್ಘಾಟಿಸಿ, ಖಾದಿ ಉತ್ಪನ್ನಗಳನ್ನು ಖರೀದಿಸಿ ಮಾತನಾಡಿದರು.

ಖಾದಿ ಬಳಕೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಖಾದಿಯತ್ತ ಚಿತ್ತ ಹರಿಸುವ ಮೂಲಕ ನಮ್ಮ ದೈನಂದಿನ ಉಡುಗೆ ತೊಡುಗೆ ಆಚಾರ ವಿಚಾರಗಳು ಸ್ವದೇಶಿ ಚಿಂತನೆಗೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಸರಕಾರದ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ವಾರದಲ್ಲಿ ಕನಿಷ್ಠ 2 ದಿನ ಖಾದಿಯ ಉಡುಗೆ ತೊಡುವ ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿರುತ್ತೇನೆ. ಈ ಚಿಂತನೆ ಸಾಕಾರಗೊಂಡಲ್ಲಿ ಸ್ವದೇಶಿ ಚಿಂತನೆಯ ಖಾದಿಗೆ ಇನ್ನಷ್ಟು ಉತ್ತೇಜನ ದೊರಕಿದಂತಾಗುತ್ತದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಸೇವೆ ಮತ್ತು ಸಮರ್ಪಣೆ ಅಭಿಯಾನದ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಹಾಗೂ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಅಭಿಯಾನದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದ ಜಿಲ್ಲಾ ಸಂಚಾಲಕರು ಹಾಗೂ ಜಿಲ್ಲಾ ಉಪಾಧ್ಯಕರುಗಳಾದ ಸುಪ್ರಸಾದ್ ಶೆಟ್ಟಿ ಬೈಕಾಡಿ, ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂ. ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!