ಕರಾವಳಿತಾಜಾ ಸುದ್ದಿಗಳು
ಘನ ತ್ಯಾಜ್ಯ ವಿಲೇವಾರಿ ಕಾರ್ಯ ಯೋಜನೆ ಕುರಿತು ಸಭೆ

ಕಡೆಕಾರ್, ಕಲ್ಯಾಣಪುರ, ಕೆಮ್ಮಣ್ಣು, ಅಂಬಲಪಾಡಿ, ಬಡಾನಿಡಿಯೂರು ಗ್ರಾಮದ ಘನ ತ್ಯಾಜ್ಯ ವಿಲೇವಾರಿಯ ಕಾರ್ಯ ಯೋಜನೆಯ ಕುರಿತು ಉಡುಪಿ ಜಿಲ್ಲಾ ಪಂಚಾಯತ್ ಡಾll ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ದಿನಾಂಕ 01-10-2021 ರಂದು ನಡೆದ ಸಭೆಯಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಘನ ತ್ಯಾಜ್ಯ ಕಾರ್ಯ ಯೋಜನೆಯ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು.