ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2021

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ ವಕೀಲರ ಸಂಘ(ರಿ.), ಉಡುಪಿ ಹಿರಿಯ ನಾಗರಿಕರ ಸಂಸ್ಥೆಗಳು- ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ(ರಿ.) ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 01-10-2021 ರಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜು ಗೀತಾಂಜಲಿ ಸಭಾಂಗಣದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2021 ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ವಕೀಲರ ಸಂಘದ ಅಧ್ಯಕ್ಷರಾದ ಬಿ. ನಾಗರಾಜ್, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ರಾವ್ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಪೊಲೀಸ್ ಉಪಾಧೀಕ್ಷಕರಾದ ಸುಧಾಕರ್ ನಾಯಕ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆಯ ಸದಸ್ಯರಾದ ಶರ್ಮಿಳಾ ಎಸ್, ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಹಾಗೂ ಹಿರಿಯನಾಗರಿಕರ ಇಲಾಖೆಯ ರತ್ನ ಮತ್ತು ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.