ಕರಾವಳಿ
ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಪದಾಧಿಕಾರಿಗಳ ಸಭೆ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ಉಡುಪಿ ಕಿದಿಯೂರ್ ಹೊಟೇಲ್ ನಲ್ಲಿ ಇಂದು ದಿನಾಂಕ 10-05-2022 ರಂದು ಆಯೋಜಿಸಿದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.