ಕರಾವಳಿತಾಜಾ ಸುದ್ದಿಗಳು

ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

ಮಲ್ಪೆ : ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್ ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಸೆ.30ರಂದು ಬೆಳಗ್ಗೆ 9.00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ತನ್ನ ಇನ್ನೊಬ್ಬ ತಮ್ಮ ಶಂಶುದ್ದೀನ್ ಎಂಬಾತ ಸುಲೈಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ. ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ, ಸುಲೈಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಹಣ ಕೊಡಬೇಕು. ಆತನನ್ನು ನಾವು ಸೆ.1ರಂದು ಮಲ್ಪೆಯಿಂದ ಅಪಹರಣ ಮಾಡಿದ್ದೇವೆ ಎಂದು ಹೇಳಿದ್ದನು. ನಂತರ ನಾವು ಮಲ್ಪೆಗೆ ಬಂದು ತಮ್ಮ ಸುಲೈಮಾನ್ ಬಗ್ಗೆ ವಿಚಾರಿಸಿದಾಗ ಸುಲೈಮಾನ್ ಮೀನು ಲಾರಿ ಚಾಲಕ ಕೆಲಸದ ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು.

ನಂತರ ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಆಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ, ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ 15 ಲಕ್ಷ ಹಣ ಕೊಡಬೇಕು. ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು ಅಪಹರಣ ಮಾಡಿರುತ್ತಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ. ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಾದಿಕ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!