ಕರಾವಳಿ

ತಂತ್ರಜ್ಞಾನದ ಬೆಳವಣಿಗೆಗೆ ಸ್ಪಂದಿಸಬೇಕು – ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಅಕ್ಟೋಬರ್ 04 : ತಂತ್ರಜ್ಞಾನದ ಬೆಳವಣಿಗೆ ಹಾಗೂ ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ತರಬೇತಾದ ಕುಶಲ ಕರ್ಮಿಗಳನ್ನು ಒದಗಿಸುವ ಹೊಣೆಯನ್ನು ಕೈಗಾರಿಕಾ ತರಬೇತಿ ಸಂಸ್ಥೆಗಳು ಹಾಗೂ ಹಣ ಯಾವ ಶಿಕ್ಷಣ ಸಂಸ್ಥೆಗಳು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಇಂದು ಅಲೆವೂರು, ಪ್ರಗತಿ ನಗರದಲ್ಲಿನ ಸರ್ಕಾರಿ ಕೈಗಾರಿಕಾತರಬೇತಿ ಸಂಸ್ಥೆಯಲ್ಲಿ ನಡೆದ ಜಿಲ್ಲಾ ‘ ಶಿಕ್ಷಣ ಮೇಳ-2021’ ರನ್ನು ಉದ್ಘಾಟಿಸಿ ಮಾತನಾಡಿದರು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದೈನಂದಿನ ತಾಂತ್ರಿಕ ಪರಿಣಿತ ಕುಶಲ ಕರ್ಮಿಗಳ ಅವಶ್ಯಕತೆಗಳಿದ್ದು, ಸ್ವಾವಲಂಭನೆಯ ಆಶಯದೊಂದಿಗೆ ಸ್ವಯಂ ಪ್ರಗತಿ ಸಾಧಿಸುವ ಹಾಗೂ ಯೋಜನೆಯ ನಿರ್ದಿಷ್ಟಗುರಿಯನ್ನು ತಲುಪುವ ಅನುಭವಿ ತಂತ್ರಜ್ಞರ ಅವಶ್ಯಕತೆಗಳು ಇಂದಿನ ದಿನಗಳಲ್ಲಿ ಇದೆ. ಈ ನಿಟ್ಟಿನಲ್ಲಿ ಶಿಶಿಕ್ಷÄ ಮೇಳದಂತ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ಕೈಗಾರಿಕೆಗಳು ಹಾಗೂ ತರಬೇತಿದಾರರ ನಡುವೆ ಸಮನ್ವಯ ಸೇತುವೆ ಕಲ್ಪಿಸುವ ಕಾರ್ಯ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ತಾಂತ್ರಿಕ ಶಿಕ್ಷಣವನ್ನು ನೀಡುವ ದಿಸೆಯಲ್ಲಿ ಸರ್ಕಾರ ಹಲವಾರು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಹೊಸ ಕಾಲೇಜುಗಳ ಸ್ಥಾಪನೆಯೊಂದಿಗೆ ಕಟ್ಟಡ,ಸಿಬ್ಬಂದಿ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ಅವಶ್ಯಕತೆಗಳನ್ನು ಪೂರೈಸುತ್ತಿದ್ದು, ಜಿಲ್ಲೆಯ ಕಾಲೇಜುಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಪೂರೈಸುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.

ಉಡುಪಿ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಕೃಷ್ಣರಾವ್ ಕೊಡಂಚ ಹಾಗೂ ಅಲೆವೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಅಂಚನ್ ಮಾತನಾಡಿದರು.

ಸರ್ಕಾರಿ ಕೈಗಾರಿಕಾತರಬೇತಿ ಸಂಸ್ಥೆಯ ಐ.ಎಂ.ಸಿ. ಅಧ್ಯಕ್ಷ ವಿಶ್ವನಾಥ ಭಟ್ ಎಂ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಮಿಕಅಧಿಕಾರಿ ಕುಮಾರ ಬಿ.ಆರ್. ಕೆ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗದ ಅಧಿಕಾರಿ ರಾಜು ಅಲೆವೂರು ಮತ್ತಿತರರು ಉಪಸ್ಥಿತರಿದ್ದರು.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಜಿಲ್ಲಾ ನೊಡಲ್ ಅಧಿಕಾರಿ ಜಗದೀಶ ಪ್ರಾಸ್ತಾವಿಕ ಮಾತನಾಡಿದರು. ನಾಡಾ ಐ.ಟಿ.ಐ ಪ್ರಾಚಾರ್ಯ ಮನೋಹರ ಆರ್ ಕಾಮತ್ ಸ್ವಾಗತಿಸಿದರು, ಸತೀಶ್ಎಸ್. ವಂದಿಸಿದರು. ರಾಜೇಶ್ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!