ರಾಷ್ಟ್ರೀಯ
15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದೌಪದಿ ಮುರ್ಮು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರಮಾಣವಚನ ಬೋಧಿಸಿದರು.
ನಿರ್ಗಮನ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಳಿಕ ಮಾತನಾಡಿದ ರಾಷ್ಟ್ರಪತಿ ದೌಪದಿ ಮುರ್ಮು,
ಅತ್ಯುನ್ನತ ಸ್ಥಾನಕ್ಕೆ ಆಯ್ಕೆ ಮಾಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ನಿಮ್ಮೆಲ್ಲರ ನಂಬಿಕೆಯೇ ನನ್ನ ಶಕ್ತಿ ಎಂದು ಅವರು ಹೇಳಿದರು