ತಾಜಾ ಸುದ್ದಿಗಳುರಾಜ್ಯ
ಬಂಟ್ವಾಳ: ಡೆತ್ ನೋಟ್ ಬರೆದಿಟ್ಟು, ಯುವತಿ ಆತ್ಮಹತ್ಯೆ

ಬಂಟ್ವಾಳ,: ಡೆತ್ ನೋಟ್ ಬರೆದಿಟ್ಟು , ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 11 ಸೋಮವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರಿ ನಿಶ್ಮಿತಾ (22) ಎಂದು ಗುರುತಿಸಲಾಗಿದೆ.
ನಿಶ್ಮಿತಾ ಡೆಂಟಲ್ ಕ್ಲಿನಿಕ್ ನಲ್ಲಿ ಸಹಾಯಕಿ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಯುವತಿ ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಮೂವರ ಹೆಸರು ಉಲ್ಲೇಖವಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.