ತಾಜಾ ಸುದ್ದಿಗಳುರಾಜ್ಯ
ಮುಕ್ತ ಸಮ್ಮತಿಯ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ನ್ಯಾಯಾಲಯ ತೀರ್ಪು

ಚಾಮರಾಜನಗರ: ಮುಕ್ತ ಸಮ್ಮತಿಯಿಂದ ನಡೆದ ಲೈಂಗಿಕ ಚಟುವಟಿಕೆ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಮದುವೆಯಾಗುತ್ತೇನೆ ಎಂದು ನಂಬಿ ಲೈಂಗಿಕ ಸಂಬಂಧಕ್ಕೆ ಸಮ್ಮತಿ ನೀಡಿದ ಬಳಿಕ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಮಹಾದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ವಿರುದ್ದ ದಾಖಲಾಗಿದ್ದ ಪ್ರಕರಣದ ತೀರ್ಪಿನಲ್ಲಿ ನ್ಯಾಯಾಲಯ ಇದನ್ನು ಸ್ಪಷ್ಟಪಡಿಸಿದೆ.
ಮದುವೆಯಾಗುತ್ತೇನೆ ಎಂದು ನಂಬಿಸಿ ಆರೋಪಿ ನನ್ನ ಜತೆ ಲೈಂಗಿಕ ಸಂಬಂಧ ಹೊಂದಿದ್ದ ಎಂದು ಮಹಿಳಾ ಕಾನ್ ಸ್ಟೇಬಲ್ ಒಬ್ಬರು ದೂರು ನೀಡಿದ್ದರು.