ರಾಜ್ಯ
ಉಡುಪಿ: ದ.ಕ. ಸೇರಿ ನಾಲ್ಕು ಜಿಲ್ಲೆಗಳಲ್ಲಿ ವೀಕೇಂಡ್ ಕರ್ಫ್ಯೂ-ರಾಜ್ಯ ಸರಕಾರದ ಆದೇಶ

ದ.ಕ. ಜಿಲ್ಲೆಯಲ್ಲಿ ಮತ್ತೆ ವಾರಾಂತ್ಯ ಕರ್ಫ್ಯೂ ಮುಂದುವರಿಕೆ ಮಾಡಲಾಗಿದ್ದು, ಉಡುಪಿ ಹಾಗೂ ಹಾಸನ ಜಿಲ್ಲೆಯನ್ನು ಹೊಸದಾಗಿ ಈ ಪಟ್ಟಿಗೆ ಸೇರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ದ.ಕ. ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಉಳಿದಂತೆ ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಮೈಸೂರು, ಚಾಮರಾಜ ನಗರಗಳಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲಾಗಿದೆ.
ಇನ್ನು ವಾರಂತ್ಯ ಕರ್ಫ್ಯೂ ಸಂದರ್ಭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು ಎಂದು ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.