ಕರಾವಳಿತಾಜಾ ಸುದ್ದಿಗಳು
ಅದಮಾರು ಪೂರ್ಣಪ್ರಜ್ಞ ಡಿಗ್ರಿ ಕಾಲೇಜು ಮುಖ್ಯಮಂತ್ರಿಗಳಿಂದ ಶಂಕು ಸ್ಥಾಪನೆ

ಪೂರ್ಣಪ್ರಜ್ಞ ಡಿಗ್ರಿ ಕಾಲೇಜು, ಅದಮಾರು ಉಡುಪಿ ಇದರ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಇಂದು ದಿನಾಂಕ 13-10-2021 ರಂದು ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರು ನೆರವೇರಿಸಿದರು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನೀಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾll. ಚಂದ್ರಶೇಖರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.