ಉಡುಪಿ ಗ್ರಾಮೀಣ ಬಂಟರ ಸಂಘ (ರಿ.) ಕನ್ವೆನ್ಶನ್ ಸೆಂಟರ್ ಮತ್ತು ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟನೆ

ಉಡುಪಿ ಗ್ರಾಮೀಣ ಬಂಟರ ಸಂಘ (ರಿ.) ಇದರ ಕನ್ವೆನ್ಶನ್ ಸೆಂಟರ್ ಮತ್ತು ಕೌಶಲ್ಯ ತರಬೇತಿ ಕೇಂದ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರು ಇಂದು ದಿನಾಂಕ 13-10-2021 ರಂದು ಉದ್ಘಾಟಿಸಿದರು. ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಸಿ.ಎಂ.ಡಿ, ಎಂ.ಆರ್.ಜಿ ಗ್ರೂಪ್ ನ ಕೆ. ಪ್ರಕಾಶ್ ಶೆಟ್ಟಿ, ಮಾಹೆ ಮಣಿಪಾಲದ ಸಹಕುಲಾಧಿಪತಿಗಳಾದ ಹೆಚ್. ಎಸ್ ಬಲ್ಲಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.