ತಾಜಾ ಸುದ್ದಿಗಳುರಾಜ್ಯ
ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ (86) ಶುಕ್ರವಾರ (ಅ.15) ಅವರ ಮಗಳ ಮನೆಯಲ್ಲಿ ನಿಧನರಾದರು.
ವಯಸ್ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರನಟರಾಗಿ ಗೋವಿಂದ ರಾವ್ ಗುರುತಿಸಿಕೊಂಡಿದ್ದರು. ಹಲವು ಸಿನಿಮಾ ಹಾಗೂ ಪ್ರಸಿದ್ಧ ಧಾರಾವಾಹಿಗಳಲ್ಲಿಯೂ ನಟಿಸಿ ಕನ್ನಡಿಗರ ಮನ ಗೆದ್ದಿದ್ದಾರೆ.
ಈಶ್ವರ ಅಲ್ಲಾ ( ಕಿರು ಕಾದಂಬರಿ) ಶೇಕ್ಸ್ ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್ ಪಿಯರ್ ಸಂವಾದ ( ವಿಮರ್ಶೆ ಲೇಖನಗಳು) ,ನಡೆ ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.
ಗೃಹ, ಮಿಥೆಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರೀ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.